ಸಂವಿಧಾನದ ಪೀಠಿಕೆ
ಭಾರತ ವಾಸಿಗಳಾದ ನಾವು, ಭಾರತವನ್ನು ಸಾರ್ವಭೌಮ ಸಮಾಜವಾದಿ ಜಾತ್ಯಾತೀತ ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ ಈ ಕೆಳಗಿನ ಹಕ್ಕುಗಳಾದ: ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;
ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ;
ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ; ಗಳನ್ನು ದೊರಕಿಸಿ,
ವೈಯುಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ ಭ್ರಾತೃತ್ವತೆ ಯನ್ನು ಪೆÇ್ರೀತ್ಸಾಹಿಸಲು ನಿರ್ಧರಿಸಿ;
ನಮ್ಮ ಸಂವಿಧಾನ ರಚನಾಸಭೆಯಲ್ಲಿ ಈ 1949ರ ನವೆಂಬರ್ ಮಾಹೆಯ 26ನೇ ದಿನದಂದು, ನಾವಾಗಿ ನಾವೇ ಈ ಸಂವಿಧಾನವನ್ನು ಸ್ವೀಕರಿಸಿ,
ಶಾಸನವನ್ನಾಗಿ ವಿಧಿಸಿಕೊಳ್ಳುತ್ತೇವೆ.
ಪೀಠಿಕೆಯಲ್ಲಿರುವ ಕೆಲವು ವಾಕ್ಯಗಳು, ಭಾರತದ ಸಂವಿಧಾನವು ರಚಿತವಾಗಿರುವ ಕೆಲವು ಮೂಲಭೂತ ಮೌಲ್ಯಗಳು ಮತ್ತು ಸಾತ್ವಿಕ ಸೂಚಿಗಳನ್ನು ಎತ್ತಿ ತೋರಿಸುತ್ತದೆ. ಈ ಪೀಠಿಕೆಯು ನಮ್ಮ ಸಂವಿಧಾನದ ದಿಕ್ಸೂಚಿಯಂತೆ ಕೆಲಸ ಮಾಡುತ್ತದೆ ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಇದೇ ದಾರಿಯಲ್ಲಿ ವ್ಯಾಖ್ಯಾನಿಸಿ ಮುನ್ನಡೆಸುತ್ತಾರೆ. ಭಾರತದ ಸಂವಿಧಾನದ ಪೀಠಿಕೆಯಲ್ಲಿ ವ್ಯಕ್ತಪಡಿಸಿರುವ ಹಾಗೂ ತಿದ್ದುಪಡಿ ಮಾಡಲು ಸಾಧ್ಯವಿಲ್ಲದ ಆಶಯಗಳನ್ನು ಬಹಳಷ್ಟು ಸಂದರ್ಭಗಳಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ಪೀಠಿಕೆಯು ಸಂವಿಧಾನದ ಒಂದು ಭಾಗವಾದರೂ ಅದನ್ನು ಅಥವಾ ಅದರ ಯಾವುದೇ ಅಂಶವನ್ನು ಕಾನೂನಿಗೆ ಅನುಸಾರವಾಗಿ ಜಾರಿ (ಹೇರು) ಮಾಡುವಂತಿಲ್ಲ.
ಪೀಠಿಕೆಯ ಮೊದಲ ಪದಗಳು – “ನಾವು, ಜನಗಳು ” – ಭಾರತಲ್ಲಿ ಅಧಿಕಾರ ಜನಗಳ ಕೈಯ್ಯಲ್ಲಿದೆ ಎಂಬ ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೊಬ್ಬ ನಾಗರೀಕ ಹಾಗೂ ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ಬಹು ಮುಖ್ಯ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ ಹೇಳುತ್ತದೆ. ಅವುಗಳೆಂದರೆ ಸಮಾಜವಾದ, ಜಾತಿ ನಿರಪೇಕ್ಷತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ. ಕೊನೆಯದಾಗಿ ಅದರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ದಿನಾಂಕ – ನವೆಂಬರ್ 26 1949 ಎಂದು ಹೇಳುತ್ತದೆ.
ಸಂವಿಧಾನದ ಆಶಯಗಳಂತೆ ನಮ್ಮ ದೇಶವು ವಿಕಾಸಗೊಳ್ಳಲಿ ಎಂದು ನಮ್ಮ ದೇಶಕ್ಕಾಗಿ ಪ್ರಾರ್ಥಿಸೋಣ.